ಬ್ರಹ್ಮಾವರ: ಉಡುಪಿ ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಎಂಬ ಭ್ರಷ್ಟಾಚಾರಿಯನ್ನು ರೆಡ್ ಹ್ಯಾಂಡ್ ಆಗಿ ಲೊಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ
ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್‌ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿ ಇಬ್ಬರನ್ನು ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ