ಜು. 21ರಿಂದ ಆ.30: ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ
ಭಟ್ಕಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚಾರಣೆ ಕ್ಷೇತ್ರದ ಶಾಖಾ ಮಠ ಭಟ್ಕಳದ ಕರಿಕಲ್ ನಲ್ಲಿ ಜು. 21 ರಿಂದ ಆ. 30ರ ವರೆಗೆ ನಡೆಯಲಿದ್ದು ಎಲ್ಲಾ ಸಮಾಜ ಮುಖಂಡರು ಹಾಗೂ ಬಂಧುಗಳು ಚಾತುರ್ಮಾಸ್ಯ ವೃತಾಚಾರಣೆ ಪಾಲ್ಗೊಳ್ಳುವಂತೆ ಬ್ರಹ್ಮಾನಂದ ಶ್ರೀಗಳ ಕರೆ ನೀಡಿದರು.
ಅವರು ಕರಿಕಲ್ಲನ ಶಾಖಾ ಮಠದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ಜು. 21 ರಂದು ಗುರುಪೂರ್ಣಿಮೆಯಂದು ಬೆಳಿಗ್ಗೆ ಚಾತುರ್ಮಾಸ್ಯ ವ್ರತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ವೈದಿಕ ವಿಧಿ ವಿಧಾನ, ಬಳಿಕ ಶ್ರೀ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಶ್ರೀಗಳ ಪುರ ಪ್ರವೇಶದ ವೈಭವದ ಮೆರವಣಿಗೆ ಮೂಲಕ ಕರಿಕಲ್ ಮಠದಲ್ಲಿ ಶ್ರೀ ರಾಮ ದೇವರಿಗೆ ವಿಶೇಷ ಪೂಜೆ, ಶ್ರೀಗಳ ಗುರುಪೂರ್ಣಿಮೆಯ ವ್ಯಾಸಪೀಠ ಪೀಠಾರೋಹಣ, ಗುರು ಪಾದುಕ ಪೂಜೆ, ಶ್ರೀಗಳ ಆಶೀರ್ವಚನ, ಧಾರ್ಮಿಕ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ ಎಸ್. ವೈದ್ಯ ಉದ್ಘಾಟನೆ ಮಾಡಲಿದ್ದು, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದರುಗಳಾದ ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ ಸಿ ಹರಿ ಪ್ರಸಾದ್, ಶಾಸಕರುಗಳಾದ ವಿ. ಸುನಿಲ್ ಕುಮಾರ್ ಕಾರ್ಕಳ, ಬೇಲೂರು ಗೋಪಾಲಕೃಷ್ಣ, ಭೀಮಣ್ಣ ಸಿರ್ಸಿ, ಹರೀಶ್ ಪೂಂಜ ಬೆಳ್ತಂಗಡಿ, ದಿನಕರ ಶೆಟ್ಟಿ ಕುಮಟಾ, ಶಿವರಾಮ್ ಹೆಬ್ಬಾರ್ ಯಲ್ಲಾಪುರ, ಸತೀಶ್ ಸೈಲ್ ಕಾರವಾರ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಶಿವಾನಂದ ನಾಯ್ಕ,, ದ. ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಭಟ್ಕಳದ ಮಾಜಿ ಶಾಸಕರುಗಳಾದ ಸುನಿಲ್‌ನಾಯ್ಕ, ಜೆ. ಡಿ. ನಾಯ್ಕ ಮೊದಲಾದವವರು ಭಾಗವಹಿಸಲಿದ್ದಾರೆ.
ಚಾತುರ್ಮಾ ಸ್ಮ ಪರ್ವ ಕಾಲದಲ್ಲಿ ಪ್ರತಿದಿನ ಭಜನೆ, ಪಾದುಕ ಪೂಜೆ, ಸಂಜೆ 6-00ರಿಂದ 10-00ರ ತನಕ ಭಕ್ತಿಪ್ರಧಾನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿ ಅಮಾವಾಸ್ಯೆ ಹುಣ್ಣಿಮೆ, ಏಕಾದಶಿಯಂದು ಶ್ರೀಗಳು ಮೌನ ವೃತದಲ್ಲಿರುವುದರಿಂದ ಆ ದಿನಗಳಲ್ಲಿ ಸೂರ್ಯಾಸ್ತದ ಬಳಿಕ ಗುರುಗಳ ದರ್ಶನ ಇರುತ್ತದೆ. ಸೆ. 3 ರಂದು ಶ್ರೀ ಗುರುದೇವ ಮಠದಲ್ಲಿ ಶ್ರೀಗಳ ಪಟ್ಟಾಭಿಷೇಕ ವರ್ದಂತಿ ನಡೆಯಲಿದೆ. ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಭಟ್ಕಳ ಹಾಗೂ ಸಾರದ ಹೊಳೆಯ ಎರಡು ಕೂಟದ ಮುಖಂಡರು ಭಾಗವಹಿಸಿದ್ದರು