ಅಭಿವೃದ್ದಿ ವಿಚಾರದಲ್ಲಿ ಸರಕಾರದಲ್ಲಿ ಯಾವುದೇ ಕೊರತೆ ಇಲ್ಲ : ಸಚಿವ ಮಂಕಾಳ್ ವೈದ್ಯ


ಕಾರವಾರ: ಅಭಿವೃದ್ಧಿ ವಿಚಾರದಲ್ಲಿ ಸರಕಾರದಲ್ಲಿ ಯಾವುದೇ ಕೊರತೆ ಇಲ್ಲ. ನಮ್ಮ ಸರಕಾರದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಅವರು ಹೇಳಿದರು

ಇಲ್ಲಿ ಪೊಲೀಸ್ ಪರೇಡ್ ಮೈದಾನದಲ್ಲಿ 76 ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದರು.ನಮ್ಮ ಸರಕಾರ ನುಡಿದಂತೆ ನಡೆದುಕೊಂಡಿದೆ..ರಾಜ್ಯವನ್ನ ಸುತ್ತಾಡಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಅದಕ್ಕೂ ಸಾಕಷ್ಟು ವಿರೋಧ ಬಂದಿದೆ.ಜಿಲ್ಲೆಯ ಜನರಿಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ 1000 ಕೋಟಿ ಹಣವನ್ನ ನೀಡಲಾಗಿದೆ. ,300_ಕೋಟಿ ಹಣ ವಿದ್ಯುತ್ ಬಿಲ್ ಉಚಿತವಾಗಿ ಜಿಲ್ಲೆಯ ಜನರಿಗೆ ನೀಡಲಾಗಿದೆ..ಶಕ್ತಿಯೋಜನೆಯಿಂದ ಮಹಿಳೆಯರಿಗೆ ಅನುಕುಲಕರವಾಗಿದೆ.

ಜಿಲ್ಲೆಯಲ್ಲಿ 600ಕೋಟಿ ಹಣವನ್ನ‌ ಯುವ ನಿಧಿಗಾಗಿ ನೀಡಲಾಗಿದೆ..ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಾಗಿ 56ಸಾವಿರ ಕೋಟಿ ಹಣ ಈಗಾಗಲೇ ನೀಡಲಾಗಿದೆ.ಈ ಜಿಲ್ಲೆಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗೆ ಏನ ಬೇಕು ಅದನ್ನ ಕಾರವಾರದಲ್ಲಿ ಮಾಡಲಾಗುತ್ತಿದೆ..ಇದಕ್ಕೆ ಪೂರಕವಾದ ವ್ಯವಸ್ಥೆಗೆ ಕಲ್ಪಿಸಲಾಗುವುದು..ಆರೋಗ್ಯದ ಜೊತೆಯಲ್ಲಿ ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು..ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ತಂಡಗಳಿoದ ಆಕರ್ಷಕ ಪಥ ಸಂಚಲನ ನಡೆಯಿತು.

ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ನಗರಾಭಿವೃದ್ದಿ ಕೋಶದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಮತ್ತು ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿಶೇಷ ಆಹಾರದ ಕಿಟ್ ವಿತರಿಸಲಾಯಿತು.

ಶಾಲಾ ವಿದ್ಯಾರ್ಥಿಗಳಿಂದ
ರಾಷ್ಟ್ರಪ್ರೇಮ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ, ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಕೋಲೆಕರ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್ ಉಪಸ್ಥಿತರಿದ್ದರು.

WhatsApp
Facebook
Telegram
error: Content is protected !!
Scroll to Top