ಭಟ್ಕಳ:ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಠ್ಠಳ್ಳಿಯಲ್ಲಿ ಮಕ್ಕಳ ಸಂತೆಯನ್ನು ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ.
ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಮಕ್ಕಳ ಮಕ್ಕಳ ಸಂತೆ ಗಮನ ಸೆಳೆಯಿತು.
ಮುಠ್ಠಳ್ಳಿಯಲ್ಲಿ ಶಾಲೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಸಂತೆಯನ್ನು ವಿಶೇಷ ಚೇತನ ವಿದ್ಯಾರ್ಥಿ
ಕೈಯಿಂದ ಮಕ್ಕಳಸಂತಿಯನ್ನು ಚಾಲನೆ ನೀಡಲಾಯಿತು.
ಶಾಲಾ ಮಕ್ಕಳಿಗೆ ವ್ಯಾವಹಾರಿಕ ಜ್ಞಾನ ಮತ್ತು ಸಂವಹನ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸಂತೆಯಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ತರಕಾರಿಗಳು ಹಣ್ಣು ಶಾಲಾ ಶಿಕ್ಷಣದ ಮೂಲ ಉದ್ದೇಶ ಶಾಲೆಯ ತರಗತಿ ಕೋಣೆ ಯಲ್ಲಿ ಕಲಿತ ವಿಷಯಗಳನ್ನು ಮಕ್ಕಳು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟ ನೀಡುವ ಸಲುವಾಗಿ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಸಮುದಾಯದ ಸಹಕಾರದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಠ್ಠಳ್ಳಿಯಲ್ಲಿ ವಿನೂತನವಾಗಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು.
ಈ ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ಸ್ಥಳೀಯವಾಗಿ ಸಿಗುವ ತರಹೇವಾರಿ ತರಕಾರಿಗಳು, ಹಣ್ಣುಗಳು, ಸೊಪ್ಪುಗಳು, ಧಾನ್ಯಗಳು, ಮನೆಯಲ್ಲಿಯೇ ತಯಾರಿಸಿದ ತಿಂಡಿ ತಿನಿಸುಗಳು, ತರಕಾರಿ ಹಣ್ಣು ಮತ್ತು ಧಾನ್ಯಗಳ ಜ್ಯೂಸ್ ಗಳು, ಮಜ್ಜಿಗೆ ಮುಂತಾದವುಗಳನ್ನು ತುಂಬಾ ಉತ್ಸಾಹದಿಂದ ಮಾರಾಟ ಮಾಡಿದರು.
ಹಾಗೂ ಇತರ ದಿನಬಳಕೆ ವಸ್ತುಗಳನ್ನು ಮಾರಾಟ ಮಾಡಿ ಲಾಭ ,ನಷ್ಟದ ಪರಿಕಲ್ಪನೆ ಮತ್ತು ಸಾರ್ವಜನಿಕರೊಂದಿಗೆ ವ್ಯವಹರಿಸುವ ವಿಧಾನದ ಬಗ್ಗೆ ತಿಳಿದುಕೊಂಡರು.
ವಾರದ ಸಂತೆಯೊಳಗಿನ ಎಲ್ಲಾ ಅಂಶಗಳು ಮಕ್ಕಳ ಸಂತೆಯಲ್ಲಿ ಮಿಳಿತವಾಗಿತ್ತು.
ಮಕ್ಕಳ ಪಾಲಕರು, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಊರ ನಾಗರಿಕರು, ಪಂಚಾಯತ್ ಸದಸ್ಯರು ಸಂತೆಗೆ ಆಗಮಿಸಿ ಮಕ್ಕಳಿಂದ ವಸ್ತುಗಳನ್ನು ಖರೀದಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಸಂತೆಯಲ್ಲಿ ಜಂಕ್ ಫುಡ್ ಗಳ ಮಾರಾಟಕ್ಕೆ ಅವಕಾಶ ಇರಲಿಲ್ಲ.ಸಾಧ್ಯವಾದಷ್ಟು ಪ್ಲಾಸ್ಟಿಕ್ ನ ಬಳಕೆಯನ್ನು ಕಡಿಮೆ ಮಾಡಲಾಗಿತ್ತು.
ಸುಮ್ಮನೆ ಕುತೂಹಲಕ್ಕೆಂದು ಬಂದ ಸಾಕಷ್ಟು ಗ್ರಾಮದ ನಿವಾಸಿಗಳು ಬ್ಯಾಗ್ ಹಿಡಿದು ಮಕ್ಕಳೊಂದಿಗೆ ಚರ್ಚಿಸಿ ವ್ಯಾಪಾರ ಮಾಡುವ ಮೂಲಕ ವಾರದ ಸಂತೆಯನ್ನು ಮಕ್ಕಳ ಸಂತೆಯಲ್ಲೆ ಮುಗಿಸುವ ಧಾವಂತ ತೋರಿದ್ದು ವಿಶೇಷ ಆಗಿತ್ತು.
ಮಕ್ಕಳ ಸಂತೆಗೆ ಆಗಮಿಸಿದ್ದ ಸಿ ಆರ್ ಪಿ ಜಯಶ್ರೀ ಆಚಾರ್ಯ ಈ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ. ರವಿ ನಾಯ್ಕ ಮಕ್ಕಳ ಸಂತೆಯ ವಿಶೇಷತೆಯ ಕುರಿತು ಮಾತನಾಡಿದರು.
ಶಾಲೆಯ ವಿದ್ಯಾರ್ಥಿ ಪಾಲಕರಾದ ವಿಧ್ಯ ನಾಯ್ಕ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆ, ಸರ್ಕಾರಿ ಶಾಲೆಗಳು ಉಳಿಯಲು ಇಂತಹ ಹಲವಾರು ಕಾರ್ಯಕ್ರಮ ಶಿಕ್ಷಕರು ರೂಪಿಸಬೇಕಿದೆ. ಕೇವಲ ಪಠ್ಯ ಸಾಕು ಎನ್ನದೆ ಪಠ್ಯೇತರ ಚಟುವಟಿಕೆಗಳಿಗೆ ಗಮನವಿರಲಿ. ಖುಷಿಯಿಂದ ಶಾಲೆಗೆ ಬರಲು ಪಠ್ಯದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೆ ಮುಂದಾಗಬೇಕು ಎಂದರು.
ಒಟ್ಟಿನಲ್ಲಿ ವಾರದ ಸಂತೆಗಿಂತ ಕಡಿಮೆ ಏನೂ ಇಲ್ಲ ಎಂಬಂತೆ ಈ ಮಕ್ಕಳ ಸಂತೆಯು ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ ,ಎಸ್ ಡಿ ಎಂ ಸಿ ಅಧ್ಯಕ್ಷ ಅನಂತ ನಾಯ್ಕ
ಎಸ್ ಡಿ ಎಮ್ ಸಿ ಉಪಾಧ್ಯಕ್ಷೆ ಶೈಲಾ ನಾಯ್ಕ ಪಂಚಾಯತ್ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ್ ಮಕ್ಕಳ
ಶಾಲ ಶಿಕ್ಷಕರಾದ ಗಂಗಾ ಮೊಗೇರ,ಗಜಜಾನ ನಾಯ್ಕ,
ಲತಾ ನಾಯ್ಕ,ವಿಜಯ ಕುಮಾರ,ದೀಪಾ ದೇವಡಿಗ್,
ಪಾಲಕ ಪೋಷಕರು, ಸೇರಿದಂತೆ ಮುಂತಾದವರು ಉಪಸ್ಥಿತಿ ಇದ್ದರು.