ಭಟ್ಕಳ: ವಿವಿಧ ಬೇಡಿಕೆ ಈಡೇರಿಕೆಗಾಗಿ ಕಳೆದ 2024 ಸೆಪ್ಟಂಬರ್‌ನಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡ ಸಂದರ್ಬದಲ್ಲಿ ನೀಡಿದ ಭರವಸೆಯನ್ನು ಪೂರೈಸದ ಹಿನ್ನೆಲೆಯಲ್ಲಿ ಎರಡನೇ ಬಾರಿ ಮತ್ತೆ ಅನಿರ್ದಿಷ್ಟಾವಧಿ ಪ್ರತಿಭಟನೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಇಲ್ಲಿನ ತಾಲೂಕಾ ಘಟಕದಿಂದ ಇಲ್ಲಿನ ಆಟೋ ರಿಕ್ಷಾ ಗಣೇಶೋತ್ಸವ ಮೈದಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರರವನ್ನು ನಡೆಸಿದರು.
ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿ ಪಡಿಸಿರುವ ಸುಮಾರು 17 ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು,ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ,ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್ ಹಾಗು ಅದಕ್ಕೆ ಅವಶ್ಯಕವಾಗಿರುವ ಇಂಟರ್‌ನೆಟ್ ಹಾಗು ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಉಂಟಾಗುತ್ತಿದೆ. ಅದ್ದರಿಂದ ನಮಗೆ ವೃತ್ತಕ್ಕೆ ಒಂದರಂತೆ ಮೊಬೈಲ್ ,ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಇಂಟರ್‌ನೆಟ್ ಸೌಲಭ್ಯ ನೀಡಬೇಕು
ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆ.ಸಿ.ಎಸ್.ಆರ್ ನಿಯಮ 15ಎ ರ ಉಪಖಂಡ(2)ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿರುತ್ತದೆ. ಆದ್ದರಿಂದ ಈ 16ಎ ಉಪಖಂಡ(2)ನ್ನು ಮರುಸ್ಥಾಪಿಸುವಂತೆ ಅಥವಾ ಕಂದಾಯ ಇಲಾಖೆಯಲ್ಲಿ ಇತರೆ ಎಲ್ಲಾ ಇಲಾಖೆಗಳಲ್ಲಿ ಮಾಡಿರುವಂತೆ ವರ್ಗಾವಣೆಯ ಮಾರ್ಗಸೂಚಿಯನ್ನು ರಚಿಸುವಂತೆ ಸಂಘದ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುತ್ತದೆ.
ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ವಾರಸುದಾರರ ಪ್ರಮಾಣ ಪತ್ರ. ಮರಣ ಪ್ರಮಾಣ ಪತ್ರ, ಮತ್ತು ಇತರೆ ದಾಖಲೆಗಳಿಲ್ಲದೇ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಚಾಲನೆ ನೀಡುತ್ತಿರುವುದನ್ನು ಕೈಬಿಡುವಂತೆ ಸೇರಿದಂತೆ, ಇನ್ನೂ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಹಿಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕಳೆದ ವರ್ಷ ಸೆ.26 ರಿಂದ ಹಮ್ಮಿಕೊಳ್ಳಲಾಗಿತ್ತು. ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅಕ್ಟೋಬರ್. 3 ರಂದು ಪ್ರತಿಭಟನೆ ವಾಪಸ್ಸು ತೆಗೆದುಕೊಳ್ಳಲಾಯಿತು. ಆದರೆ ನಮಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಹೀಗಾಗಿ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ನಿರ್ಣಯದಂತೆ ಮತ್ತೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಜಿಲ್ಲಾ ಜಿಲ್ಲಾ ಅಧ್ಯಕ್ಷ ಚಾಂದಬಾಷಾ ತಿಳಿಸಿದ್ದಾರೆ.
ಮುಷ್ಕರ ಸ್ಥಳಕ್ಕೆ ಭಟ್ಕಳ ಸರ್ಕಾರಿ ನೌಕರರು ಸಂಘದ ಅಧ್ಯಕ್ಷ ಎಂ.ಎನ್ ನಾಯ್ಕ ಭೇಟಿ ನೀಡಿ ಮುಷ್ಕರ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕ ಸಂಘದ ಅಧ್ಯಕ್ಷೆ ಲತಾ ನಾಯ್ಕ,ಗ್ರಾಮ ಆಡಳಿತಾಧಿಕಾರಿಗಳಾದ ಚರಣ ಗೌಡ,ಗಣೇಶ ಕುಲಾಲ್, ವೀಣಾ ನಾಯ್ಕ,
ತಿಪ್ಪಣ್ಣ,ವಿಜೇತ್,ದಿವ್ಯ,ವಿನುತ,ಬೀಮಣ್ಣ,ಶಬಾನ ಬಾನು,ದೀಕ್ಷಿತ,ಸುನೀಲ್, ದಿಪ್ತಿ,ವೀಣಾ,ಐಶ್ವರ್ಯ ಅಶ್ವಿನಿ,ಸೇರಿದಂತೆ ಮುಂತಾದವರು ಉಪಸ್ಥಿತಿ ಇದ್ದರು.