ಗೃಹ ಕಚೇರಿಯಲ್ಲಿ ಜನರಿಂದ ಅಹವಾಲು ಸ್ವೀಕರಿಸಿದ ಮಂಕಾಳ ವೈದ್ಯ
ಭಟ್ಕಳ: ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಶನಿವಾರ ಮುರಡೇಶ್ವರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಜನರ ಅಹವಾಲು ಸ್ವೀಕರಿಸಿ ಜನರ ಸಮಸ್ಯೆಕ್ಕೆ ಪರಿಹಾರ ಒದಗಿಸಿ ಕೊಟ್ಟರು
ಜನತಾ ದರ್ಶನಕ್ಕೆ ಭಾರಿ ಪ್ರತಿಸ್ಪಂದನೆ
ಈ ಜನತಾ ದರ್ಶನಕ್ಕೆ ಭಟ್ಕಳ-ಹೊನ್ನಾವರ ಕ್ಷೇತ್ರದವರಲ್ಲದೇ ಜಿಲ್ಲೆಯ ವಿವಿಧೆಡೆಗಳಿಂದಲೂ ಸಾವಿರಾರು ಜನ ಆಗಮಿಸಿದ್ದರು. ಜನರು ಸರತಿ ಸಾಲಿನಲ್ಲಿ ನಿಂತು ತಮ್ಮ ಸಮಸ್ಯೆಗಳನ್ನು ಸಚಿವರಿಗೆ ತಿಳಿಸಿದರು. ಸಚಿವರು ಪ್ರತಿಯೊಬ್ಬರೊಂದಿಗೆ ನೇರವಾಗಿ ಮಾತನಾಡಿ, ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ಉಳಿದ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಸಮಸ್ಯೆಗಳ ಮನವಿ
ಜನತೆ ವೈಯಕ್ತಿಕ ಸಮಸ್ಯೆಗಳ ಜೊತೆಗೆ ಮನೆ, ರಸ್ತೆ, ಪಿಂಚಣಿ ಯೋಜನೆ, ಆರೋಗ್ಯ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು. ಸಂಜೆಯವರೆಗೆ ಸಚಿವರು ಜನರ ಅಹವಾಲು ಆಲಿಸಿದರು.
ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಗಮನ
ಕೆಲವು ತ್ವರಿತ ಪರಿಹಾರ ಅಗತ್ಯವಿರುವ ಸಮಸ್ಯೆಗಳ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿ ಪರಿಹಾರ ಕೊಡಲು ತಮ್ಮ ಆಪ್ತ ಸಹಾಯಕರಿಗೆ ಸೂಚಿಸಿದರು. ನೂರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಯಿತು.
ಜನರ ಅನುಕೂಲಕ್ಕೆ ಉಪಹಾರದ ವ್ಯವಸ್ಥೆ
ಜನತಾ ದರ್ಶನಕ್ಕೆ ಆಗಮಿಸಿದ ಎಲ್ಲರಿಗೂ ಸಚಿವರು ಉಪಹಾರದ ವ್ಯವಸ್ಥೆ ಮಾಡಿದ್ದರು.
ಪ್ರಮುಖ ನಾಯಕರು ಉಪಸ್ಥಿತಿ
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ, ಜಿ.ಪಂ. ಮಾಜಿ ಸದಸ್ಯ ಅಲ್ಬರ್ಟ್ ಡಿಕೋಸ್ತ ಮತ್ತಿತರರು ಉಪಸ್ಥಿತರಿದ್ದರು.