ಶಿರಸಿಯಲ್ಲಿ ನೂತನ ಕೇಂದ್ರ ಬಸ್ ನಿಲ್ದಾಣ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗೆ ಭವ್ಯ ಉದ್ಘಾಟನೆ

ಶಿರಸಿ: ರಾಜ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಮತ್ತು ಉತ್ತರ ಕನ್ನಡ ಉಸ್ತುವಾರಿ ಸಚಿವರಾದ ಶ್ರೀ ಮಾಂಕಾಳು ವೈದ್ಯ ಅವರು ಜಂಟಿಯಾಗಿ ಶಿರಸಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೇಂದ್ರ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿಯನ್ನು ಇಂದು ಉದ್ಘಾಟಿಸಿದರು.

ಸಚಿವ ಮಾಂಗಾಳು ವೈದ್ಯ ಮಾತನಾಡಿ, “ನಮ್ಮ ಉದ್ದೇಶ ಜನಸಾಮಾನ್ಯರಿಗೆ ಉತ್ತಮ ಸಾರಿಗೆ ಸೇವೆ ನೀಡುವುದು. ಹೊಸ ಬಸ್ ನಿಲ್ದಾಣದಿಂದ ಜನರಿಗೆ ಸುಗಮ ಸಂಚಾರದ ಅನುಕೂಲ ಲಭ್ಯವಾಗಲಿದೆ. ಇದರ ಜೊತೆಗೆ ಸಾರಿಗೆ ಇಲಾಖೆಯ ಕಾರ್ಯಕ್ಷಮತೆಯೂ ಹೆಚ್ಚಳವಾಗಲಿದೆ”ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ಸರ್ಕಾರ ಬದ್ಧವಾಗಿದೆ. ಹೊಸ ಬಸ್ ನಿಲ್ದಾಣಗಳ ನಿರ್ಮಾಣದ ಮೂಲಕ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ” ಎಂದು ಹೇಳಿದರು.

ಈ ಹೊಸ ಬಸ್ ನಿಲ್ದಾಣ ಹಾಗೂ ಕಚೇರಿ, ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗೆ ಪ್ರಮುಖ ಹಂತವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಈ ಸಮಾರಂಭದಲ್ಲಿ ಶಿರಸಿ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ, ಶಾಸಕರಾದ ಶ್ರೀ ಶಿವರಾಮ ಹೆಬ್ಬಾರ್, ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp
Facebook
Telegram
error: Content is protected !!
Scroll to Top